SUDDILIVE || SHIVAMOGGA
NT ರಸ್ತೆಯಲ್ಲಿ ಗಾಂಜಾ ಮರಾಟ ಆರೋಪಿ ಬಂಧನ-Ganja smuggling suspect arrested on NT Road
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ದೊಡ್ಡಪೇಟೆ ಪೊಲೀಸರು ಮತ್ತೋರ್ವನನ್ನ ಬಂಧಿಸಿದ್ದಾರೆ.
ಏ.12 ರಂದು ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಐ ಮತ್ತು ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ದಾಳಿ ನಡೆಸಿದ್ದಾರೆ.
ಆರೋಪಿ ಆಸೀಫ್ ಖಾನ್ 33 ವರ್ಷ, ರಾಗಿಗುಡ್ಡ ಶಿವಮೊಗ್ಗ ಈತನನ್ನು ದಸ್ತಗಿರಿ ಮಾಡಿ, ಆರೋಪಿಯಿಂದ ಅಂದಾಜು 70,000/- ರೂ ಮೌಲ್ಯದ 1ಕೆಜಿ 400 ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 80,000/- ರೂ ಮೌಲ್ಯದ ಆಟೋವನ್ನು ವಶಪಡಿಸಿಕೊಂಡಿದೆ. ನಂತರ ಆರೋಪಿ ವಿರುದ್ಧ ಠಾಣಾ ಗುನ್ನೆ ಸಂಖ್ಯೆ 134/2026 ಕಲಂ 20(b) (ii) B) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
Ganja smuggling suspect arrested on NT Road
