SUDDILIVE || SHIVAMOGGA
ಸಂಸದರ ಜೊತೆ ನಗರದ ಸುಗಮ ಸಂಚಾರ ಕುರಿತು ಅಧಿಕಾರಿಗಳ ಸಭೆ-Officials meet with MPs to discuss smooth traffic in the city
ಶಿವಮೊಗ್ಗ ನಗರದ ಸುಗಮ ಸಂಚಾರ ಹಾಗೂ ಮೂಲಭೂತ ಸೌಕರ್ಯಗಳ ವೃದ್ಧಿಯ ದೃಷ್ಟಿಯಿಂದ ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ:
ಸುಬ್ಬಯ್ಯ ಮೆಡಿಕಲ್ ಕಾಲೇಜಿನಿಂದ ಎಂ.ಆರ್.ಎಸ್ ವೃತ್ತದವರೆಗೆ (NH-13) ಹಾಗೂ ಹರಿಗೆಯಿಂದ ಸಾಗರ ರಸ್ತೆಯ ಶ್ರೀರಾಂಪುರದವರೆಗೆ (NH-206) ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕುರಿತು ಕೇಂದ್ರ ಭೂಸಾರಿಗೆ ಮಂತ್ರಾಲಯಕ್ಕೆ ಸಲ್ಲಿಸಿರುವ ಮನವಿಯ ಪ್ರಗತಿಯ ಬಗ್ಗೆ ಚರ್ಚಿಸಲಾಯಿತು.
ಆಧುನಿಕ ಮೇಲ್ಸೇತುವೆಗಳು (Foot Overbridge):
ನಗರದ ಜನದಟ್ಟಣೆ ಇರುವ ಪ್ರಮುಖ ವೃತ್ತಗಳಲ್ಲಿ ಪಾದಚಾರಿಗಳು ರಸ್ತೆ ದಾಟುವಾಗ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಜಪಾನ್ ಮಾದರಿಯ ಆಧುನಿಕ ಮೇಲ್ಸೇತುವೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಎಂ.ಆರ್.ಎಸ್ ವೃತ್ತ, ಸಂದೇಶ್ ಮೋಟಾರ್ ವೃತ್ತ, ಮುಖ್ಯ ಬಸ್ ನಿಲ್ದಾಣ ವೃತ್ತ, ಪ್ರವಾಸಿ ಮಂದಿರ ವೃತ್ತ ಮತ್ತು ಗಾಡಿಕೊಪ್ಪ ಸರ್ಕಾರಿ ಶಾಲೆಯ ಹತ್ತಿರ ಈ ಸೇತುವೆಗಳ ನಿರ್ಮಾಣದ ಸಾಧ್ಯತೆಗಳ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಭೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ರಾಷ್ಟ್ರೀಯ ಹೆದ್ದಾರಿ ಯೋಜನಾ ವಿಭಾಗದ ಮುಖ್ಯಸ್ಥರಾದ ಶ್ರೀ ಅನುಪ್ ಶರ್ಮ, ಇಇ ಶ್ರೀ ಲೋಕೇಶ್, ಮೆಸ್ಕಾಂ ಇಇ ಶ್ರೀ ವೀರೇಂದ್ರ, ಸಂಚಾರಿ ಪೊಲೀಸ್ ವಿಭಾಗದ ಡಿವೈಎಸ್ಪಿ ಶ್ರೀ ಸಂಜೀವ್ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Officials meet with MPs to discuss smooth traffic in the city
