ಏ.12 ರಂದು ಕೆಲವೆಡೆ ವಿದ್ಯುತ್ ವ್ಯತ್ಯಯ-Power outage in some places on April 12

SUDDILIVE || SHIVAMOGGA

ಏ.12 ರಂದು ಕೆಲವೆಡೆ ವಿದ್ಯುತ್ ವ್ಯತ್ಯಯ-Power outage in some places on April 12

Power, Outage
     

ಏ.12 ರಂದು ನಗರ ಮತ್ತು ತಾಲೂಕಿನ ಸುತ್ತಮುತ್ತ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.12 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿನ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ವಿನಾಯಕನಗರ, ಹನುಮಂತನಗರ, ರವೀಂದ್ರನಗರ, ರಾಜೇಂದ್ರನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್ -20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 12 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power outage in some places on April 12

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close