SUDDILIVE || HOLALKERE
ರಸ್ತೆಯ ಮೇಲೆ ಸಿಲಿಂಡರ್ ಇಟ್ಟು ಪ್ರತಿಭಟನೆ- Protest by placing cylinders on the road
ರಸ್ತೆಯ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರಸ್ತೆ ತಡೆಯನ್ನ ಹೊಳಲ್ಕೆರೆ ತಾಲೂಕಿನಲ್ಲಿ ನಡೆಸಿದ್ದಾರೆ. ಗ್ಯಾಸ್ ನ್ನ ಪೂರೈಸಲು ಏಜೆನ್ಸಿಯವರು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯರು ಬಿ.ಹೆಚ್. ರಸ್ತೆಯನ್ನು ಬಂದ್ ಮಾಡಿ ದಿಡೀರ್ ಬೃಹತ್ ಪ್ರತಿಭಟನೆ ನಡೆಸಿದರು.
ಇಂದು ಹೊಳಲ್ಕೆರೆಯ ಇಂಡಿಯನ್ ಗ್ಯಾಸ್ ಏಜೆನ್ಸಿಯೊಂದರ ಮುಂದೆ ಜಮಾಯಿಸಿದ ನೂರಾರು ಗ್ರಾಹಕರು, ಏಜೆನ್ಸಿಯ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಷ್ಟೇ ಅಲ್ಲದೆ, ಪ್ರಮುಖ ಬಿ.ಹೆಚ್. ರಸ್ತೆಯನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತಡೆದಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಪ್ರಯಾಣಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುವಂತಾಯಿತು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ನಮಗೆ ಸಿಲಿಂಡರ್ ಸಿಗುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಸಾರ್ವಜನಿಕರು ಪಟ್ಟು ಹಿಡಿದರು. ಏಜೆನ್ಸಿಯ ಹಠಮಾರಿತನಕ್ಕೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದರು.
ಏಜೆನ್ಸಿಗಳ ನಡುವೆ ತಾರತಮ್ಯದ ಆರೋಪ:
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯರೊಬ್ಬರು ಮಾತನಾಡಿ, ನಾವು ಒಂದು ತಿಂಗಳ ಹಿಂದೆಯೇ ಗ್ಯಾಸ್ ಬುಕ್ ಮಾಡಿದ್ದೇವೆ. ಆದರೆ ಈ ಇಂಡಿಯನ್ ಗ್ಯಾಸ್ ಏಜೆನ್ಸಿಯವರು ನಮಗೆ ಪೂರೈಕೆ ಮಾಡುತ್ತಿಲ್ಲ. ಆದರೆ ಇದೇ ಹೆಸರಿನ ಮತ್ತೊಂದು ಏಜೆನ್ಸಿಯವರು ಸರಿಯಾಗಿ ಪೂರೈಕೆ ಮಾಡುತ್ತಿದ್ದಾರೆ. ಅವರಿಗೆ ಸಾಧ್ಯವಾಗುವುದು ಇವರಿಗೆ ಏಕೆ ಸಾಧ್ಯವಾಗುತ್ತಿಲ್ಲ? ಈ ಬಗ್ಗೆ ಈ ಹಿಂದೆಯೇ ತಹಶೀಲ್ದಾರ್ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Protest by placing cylinders on the road