SUDDILIVE || SHIVAMOGGA
ಮಹಿಳಾ ಡಾಕ್ಟರ್ ಜೊತೆ ಅಸಭ್ಯ ವರ್ತನೆ-Rude behavior with a female doctor
ಮಹಿಳಾ ಡಾಕ್ಟರ್ ಜೊತೆಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜನವರಿ 7ರಂದು ಘಟನೆ ಸಂಭವಿಸಿದ್ದು ಮೇಲಾಧಿಕಾರಿಗಳಿಂದ ಅನುಮತಿ ಪಡೆದು ವೈದ್ಯೆ ತಡವಾಗಿ ದೂರು ದಾಖಲಿಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೋಡಮಗ್ಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಧ್ಯಾಹ್ನ ರೋಗಿಗಳು ಇಲ್ಲದ ಸಮಯದಲ್ಲಿ ವೈದ್ಯಾಧಿಕಾರಿ ಶೌಚಾಲಯಕ್ಕೆ ತೆರಳಿದ್ದರು. ಈ ವೇಳೆ ಆಸ್ಪತ್ರೆಗೆ ಬಂದ ವ್ಯಕ್ತಿಯೊಬ್ಬ, ಡಾ. ಹಂಸವೇಣಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ವ್ಯಕ್ತಿಯು ಸರ್ಕಾರಿ ಕೆಲಸ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ವೈದ್ಯೆ ಮೇಲಾಧಿಕಾರಿಗಳ ಅನುಮತಿ ಪಡೆದು ತಡವಾಗಿ ದೂರು ನೀಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Rude behavior with a female doctor
