SUDDILIVE || SHIVAMOGGA
ಶಿವಮೊಗ್ಗ-ಐದು ಕಡೆ ಲೋಕಾಯುಕ್ತ ದಾಳಿ-Shivamogga - Lokayukta raids five locations
ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇವರಾಜು ಅರಸ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.
ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಶೋಭಾರವರಿಗೆ ಸೇರಿದ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.
Shivamogga - Lokayukta raids five locations
