SUDDILIVE || SHIVAMOGGA
ಜನದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು- Special train between Yeshwantpur-Talaguppa to relieve congestion
ಬೇಸಿಗೆ ರಜೆಯ ಜನದಟ್ಟಣೆ ನಿವಾರಿಸಲು ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ
ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಮೇ 01 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಮೇ. 02) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಮೇ 4(ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.
ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.
Special train between Yeshwantpur-Talaguppa to relieve congestion
