SUDDILIVE || SHIVAMOGGA
ನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ- Strict action will be taken if auto LPG/CNG is sold at a higher price than the prescribed price
ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.
ದರ ಪ್ರದರ್ಶನ ಕಡ್ಡಾಯ: ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.
ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ 'ಅಗತ್ಯ ವಸ್ತುಗಳ ಕಾಯ್ದೆ-1955' ಮತ್ತು 'ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001' ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Strict action will be taken if auto LPG/CNG is sold at a higher price than the prescribed price
