SUDDILIVE || BHADRAVATHI
ಭದ್ರಾವತಿ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷರಾದ ವಿನೋದ್ ಕುಮಾರ್ ಸಾವು- Vinod Kumar, former president of Bhadravati Sangha passed away
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯಲ್ಲಿ ಸಾಮಗ್ರಿಗಳನ್ನು ಇಳಿಸುವ ಸಂದರ್ಭದಲ್ಲಿ ಕೇಬಲ್ ತುಂಡಾಗಿ ಸಾಮಾಗ್ರಿ ಬಿದ್ದು ಭದ್ರಾವತಿ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ.
ನಿನ್ನೆ ಸಂಜೆ ವಿನೋದ್ ಕುಮಾರ್ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಈ ಘಟನೆ ನಡೆಸಿದ್ದು ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆ ಉಸಿರು ಎಳೆದಿರುವುದಾಗಿ ಕೇಳಿ ಬಂದಿದೆ.
ಕಾರ್ಮಿಕರ ಪರವಾಗಿ ಸದಾ ಧ್ವನಿಯೆತ್ತುತ್ತಿದ್ದ ಅವರು, ಅಪಘಾತದ ವೇಳೆ ಕಬ್ಬಿಣದ ಸ್ಲ್ಯಾಬ್‌ಗಳು ಬೀಳುತ್ತಿದ್ದಾಗ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ನಿನ್ನೆ ಸಂಜೆಯೇ ಸಂಸದ ರಾಘವೇಂದ್ರ ಆಸಗಪತ್ರೆಗೆ ಭೇಟಿ ನೀಡಿ ಕಾರ್ಮಿಕ ಸಂಘದೊಂದಿಗೆ ಮಾತನಾಡಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Vinod Kumar, former president of Bhadravati Sangh passed away
