SUDDILIVE || SHIVAMOGGA
ಗಾಳಿ ಮಳೆಗೆ ಶಿವಮೊಗ್ಗದ ಗ್ರಾಮಾಂತರ ಭಾಗದಲ್ಲಿ ಹಾನಿ-ಸಂಸದರೊಂದಿಗೆ ಬಿಜೆಪಿ ನಿಯೋಗ ಡಿಸಿಗೆ ಭೇಟಿ-Wind and rain damage in rural areas of Shivamogga - BJP delegation with MPs visits DC
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದಾಗಿ ರೈತರ ಬೆಳೆ ಹಾನಿ, ಮನೆಗಳ ಮೇಲ್ಛಾವಣಿ ಕುಸಿತವಾದರೆ, ವಿದ್ಯುತ್ ವ್ಯತ್ಯಯವಾಗಿವೆ. ಗಂಭೀರ ಸಮಸ್ಯೆಗಳು ಎದುರಾಗಿವೆ. ಈ ಕುರಿತು ಇಂದು ಬಿಜೆಪಿ ಜಿಲ್ಲಾ ಘಟಕ ಹಾಗೂ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ವೇಳೆ ಡಿಸಿ ಅವರು ಅನುಪಸ್ಥಿತಿಯಲ್ಲಿ ಜಿಪಂ ಸಿಇಒ ಹೇಮಂತ್ ಕುಮಾರ್ ಬಿಜೆಪಿ ನಿಯೋಗದ ಮನವಿ ಸ್ವೀಕರಿಸಿದ್ದಾರೆ.
ತ್ವರಿತ ಸಮೀಕ್ಷೆ ಮತ್ತು ಪರಿಹಾರ:
ಮಳೆಯಿಂದ ಮನೆ ಕಳೆದುಕೊಂಡವರಿಗೆ ಹಾಗೂ ಅಡಿಕೆ ಸೇರಿದಂತೆ ವಿವಿಧ ಬೆಳೆ ಹಾನಿಗೊಳಗಾದ ರೈತರಿಗೆ ಜಿಲ್ಲಾಡಳಿತವು ತಕ್ಷಣವೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ವಿತರಿಸಬೇಕು.
ವಿದ್ಯುತ್ ಸಂಪರ್ಕ ಪುನರ್ ಸ್ಥಾಪನೆ:
ಜಿಲ್ಲೆಯ ಅನೇಕ ಕಡೆ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೆಸ್ಕಾಂ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಿ, ತುಂಡಾದ ತಂತಿಗಳನ್ನು ಸರಿಪಡಿಸಿ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.
ಸಾರ್ವಜನಿಕ ಸುರಕ್ಷತೆ:
ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಹಾಗೂ ತುಂಡಾಗಿ ಬಿದ್ದಿರುವ ತಂತಿಗಳಿಂದ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು.
ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ.
Wind and rain damage in rural areas of Shivamogga - BJP delegation with MPs visits DC
