SUDDILIVE || RIPPONPETE
ವಿದ್ಯುತ್ ಕಂಬ ಮುರಿದುಬಿದ್ದು ಕಾರ್ಮಿಕ ಸಾವು-Worker dies after electric pole collapses
ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಸುತ್ತಿದ್ದ ವೇಳೆಯಲ್ಲಿ ವಿದ್ಯುತ್ ಕಂಬ ಏಕಾಏಕಿ ತುಂಡಾಗಿ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿಯಲ್ಲಿ ನಡೆದಿದೆ.
ಮೈಸೂರು ಮೂಲದ ವಿಜಯ್ (30) ಮೃತಪಟ್ಟ ದುರ್ದೈವಿ. ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಕ್ಕಾಗಿ ಇವರು ಲೈಟ್ ಕಂಬ ಏರಿದ್ದರು. ಈ ಸಂದರ್ಭ ಹಳೆಯ ವಿದ್ಯುತ್ ಕಂಬವು ಏಕಾಏಕಿ ಬುಡಸಮೇತ ತುಂಡಾಗಿ ಬಿದ್ದಿದೆ. ಕಂಬದ ಮೇಲಿದ್ದ ವಿಜಯ್ ಅವರು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು ಎಂದು ಆರೋಪಿಸಲಾಗಿದೆ.
ತಕ್ಷಣವೇ ಗಾಯಾಳು ವಿಜಯ್ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Worker dies after electric pole collapses
