SUDDILIVE || SHIVAMOGGA
ಶಿವಮೊಗ್ಗದ ಎಪಿಎಂಸಿ ಆವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ-A decomposed body was found in the APMC premises in Shimoga
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಗರದ ಬೆಂಕಿ ನಗರದ ನಿವಾಸಿ ಆನಂದ (38) ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದೆ. ಆನಂದ ಕಳೆದ 15 ವರ್ಷಗಳಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಹಮಾಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ವರ್ಷಗಳಿಂದ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು ಎಂದ ಸಹೋದ್ಯೋಗಿಗಳು ತಿಳಿಸಿದ್ದಾರೆ.
ಇತ್ತೀಚಿಗೆ ಮನೆಗೆ ಹೋಗಿರಲಿಲ್ಲ. ಮಾರುಕಟ್ಟೆ ಆವರಣದಲ್ಲಿಯೇ ವಾಸ್ತವ್ಯ ಹೂಡಿದ್ದರು. ಸ್ವಲ್ಪ ದಿನದಿಂದ ಆನಂದ್ ಎಲ್ಲಿಯು ಕಾಣಿಸಿರಲಿಲ್ಲ. ಕಳೆದ ಮೂರ್ನಾಲ್ಕು ದಿನದಿಂದ ಎಪಿಎಂಸಿ ಆವರಣದಲ್ಲಿ ದುರ್ವಾಸನೆ ಬರುತ್ತಿತ್ತು. ಈ ಹಿನ್ನೆಲೆ ಪರಿಶೀಲಿಸಿದಾಗ ಮುಂಡಿಯ ತಾರಸಿಯ ಮೇಲೆ ಶವ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಿನೋಬನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನಂದ್ ಸಾವಿನ ಕಾರಣವೇನು ಎಂಬುದು ಇನ್ನಷ್ಟೆ ತಿಳಿಯಬೇಕಿದೆ.
A decomposed body was found in the APMC premises in Shimoga
