ಸಿಎಂ ರಾಜೀನಾಮೆ ನೀಡಲಿದ್ದಾರೆ, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯಲಿದೆ-ಭವಿಷ್ಯ ನುಡಿದ ವಿಜೇಂದ್ರ- CM will resign, early elections will be held in the state - Vijendra predicted

SUDDILIVE || SHIVAMOGGA

ಸಿಎಂ ರಾಜೀನಾಮೆ ನೀಡಲಿದ್ದಾರೆ, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯಲಿದೆ-ಭವಿಷ್ಯ ನುಡಿದ ವಿಜೇಂದ್ರ-  CM will resign, early elections will be held in the state - Vijendra predicted    

Vijendra, CM



ದೆಹಲಿಯಲ್ಲಿ ಸರಣಿ ಸಭೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಅವನತಿ ಆರಂಭವಾಗಲಿದೆ. ಈ ಬೆಳವಣಿಗೆಯನ್ನು ದೇಶ ಹಾಗೂ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ನಂತರ ಮುಂದೆ ಸಿಎಂ ಯಾರಾಗುತ್ತಾರೆ ಎಂಬುದು ತಿಳಿದಿಲ್ಲ. ಆದರೆ ಯಾರೇ ಆದರೂ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ.
ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯುವುದು ಖಚಿತವಾಗಿದೆ.  ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಅವಧಿ ಪೂರ್ವ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ಅನುಭವಿ ಮುಖ್ಯಮಂತ್ರಿಯಾಗಿದ್ದಾರೆ
ನನಗೆ ಅವರ ಬಗ್ಗೆ ವೈಯಕ್ತಿಕ ದ್ವೇಷವಿಲ್ಲ. ಆದರೆ ಅವರ ಆಡಳಿತದಲ್ಲಿ ರಾಜ್ಯದ ಸಾಲದ ಪ್ರಮಾಣ ಮಿತಿಮೀರಿದೆ. ಹತ್ತು ಲಕ್ಷ ಕೋಟಿಗೂ ಹೆಚ್ಚಿನ ಸಾಲವನ್ನು ಅವರು ಮಾಡಿದ್ದಾರೆ. ಭ್ರಷ್ಟಾಚಾರ ಹಾಗೂ ದೂರಾಡಳಿತ ಮಿತಿ ಮೀರಿದೆ ಎಂದು ಸರಣಿ ಆರೋಪ ಮಾಡಿದರು.

ರಾಜ್ಯದ ಇತಿಹಾಸದಲ್ಲೇ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ  ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮೂಡಾ ಹಗರಣ ಸೇರಿದಂತೆ ಅನೇಕ ಭ್ರಷ್ಟಾಚಾರ ನಡಿದಿದೆ. ಇದೀಗ ಅಂತಿಮವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ. ಮುಂದೆ ಸಿಎಂ ಯಾರಾಗುತ್ತಾರೆ ಎಂಬುದು ಮುಖ್ಯ ಅಲ್ಲ ಎಂದರು.

ರಾಜ್ಯದ ಅಭಿವೃದ್ಧಿ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದು ಮುಖ್ಯ. ಇಂಥ ಸಂದರ್ಭದಲ್ಲಿ ನಾವು ಜನತೆಯ ಮುಂದೆ ಹೋಗಬೇಕಿದೆ. ವಿರೋಧ ಪಕ್ಷವಾಗಿ ನಾವು ಜನತೆಗೆ ನಮ್ಮ ನಿಲುವನ್ನು ತಿಳಿಸಬೇಕಿದೆ.
ಈ ಕೆಲಸವನ್ನು ನಾವು ಮಾಡಲಿದ್ದೇವೆ ಎಂದರು.

ಉಪ ಚುನಾವಣೆಯ ಗೆಲುವೆ ಮಾನದಂಡವಾಗಿದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತಿರಲಿಲ್ಲ. ರಾಜ್ಯಕ್ಕೆ ಭೇಟಿ ನೀಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಗೆಲುವು ಸೂಚನೆ ನೀಡಿದ್ದಾರೆ.
ಸಂಘಟನಾತ್ಮಕವಾಗಿ ಪಕ್ಷವನ್ನು ಸದೃಢ ಗೊಳಿಸುವ ಕುರಿತು ಚರ್ಚೆ ನಡೆಸಿದ್ದಾರೆ. 

ಪ್ರತಿಯೊಬ್ಬ ಶಾಸಕರು ಹಾಗೂ ನಾಯಕರೊಂದಿಗೆ ಚರ್ಚಿಸಿದ್ದಾರೆ. ನನ್ನನ್ನು ಒಳಗೊಂಡಂತೆ ಅನೇಕರೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮುಂಗಾರು ಪೂರ್ವ ಅನಾಹುತದಿಂದ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.  ಶಿವಮೊಗ್ಗ ಜಿಲ್ಲೆಯ ಒಂದರಲ್ಲಿ ಲಕ್ಷಾಂತರ ಅಡಿಕೆ ಮರಗಳು ಧರೆಗುರುಳಿವೆ.
ಸಚಿವರಾಗಲಿ ರಾಜ್ಯ ಸರ್ಕಾರವಾಗಲಿ ಈ ಬಗ್ಗೆ ಗಮನ ಹರಿಸಿಲ್ಲ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಎದುರಾಗಿದೆ ಎಂದು ದೂರಿದರು.

ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುವ ಯತ್ನ ನಡೆದಿದೆ. ಎಲ್ಲ ವಿಷಯಗಳ ಕುರಿತು ಪಕ್ಷ ಸೂಕ್ತ ಹೋರಾಟ ನಡೆಸಲಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

CM will resign, early elections will be held in the state - Vijendra predicted

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close