SUDDILIVE || SHIVAMOGGA
ಶಿವಮೊಗ್ಗದಲ್ಲಿ ಕುಡುಕರ ಹಾವಳಿ, ಡ್ರೋಣ್ ಹಾರಿಸಿ ಕ್ರಮ- Drunk people in Shivamogga, drones used to take action
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಡ್ರೋಣ್ ಕ್ಯಾಮೆರಾ ಮುಖಾಂತರ ಕಣ್ಗಾವಲು ಹಾಯಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು ಗ್ರಾಮದ ಹೊರ ವಲಯದಲ್ಲಿ ಡ್ರೋಣ್ ಹಾರಿಸಿದಾಗ ಕೆಲವು ಜನರು ಕೋಟೆಗಂಗೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ನಂತರ ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಧ್ಯಪಾನ ಮಾಡುತ್ತಿದ್ದ 1) ಸಂದೀಪ್, 2) ಶಿವನೇಶ ಕುಮಾರ, ಮತ್ತು 3) ಮೇಘರಾಜ್ ರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ, ಕರ್ನಾಟಕ ಅಬಕಾರಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ.
Drunk people in Shivamogga, drones used to take action
