SUDDILIVE || HOSANAGARA
ಹೊಸನಗರ-ಪಲ್ಟಿಯಾದ ಖಾಸಗಿ ಬಸ್-Hosanagara-Private bus overturns
ಇಲ್ಲಿನ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯ ತಪ್ಪಿಸಿಕೊಂಡಿದ್ದಾರೆ
ಇಂದು ಬೆಳಿಗ್ಗೆ ಸುಮಾರು 5:15ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಬಸ್‌ನಲ್ಲಿದ್ದ ಒಟ್ಟು 11 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.
Hosanagara-Private bus overturns

