ತಳ್ಳಿಕಟ್ಟೆಯಲ್ಲಿ ಅಡುಗೆ ಅನಿಲ ಸೋರಿಕೆ, ಅಗ್ನಿ ಅವಘಡದಿಂದ ಮನೆಗೆ ಹಾನಿ-House damaged due to cooking gas leak, fire in Tarikatte

SUDDILIVE || SHIVAMOGGA

ತಳ್ಳಿಕಟ್ಟೆಯಲ್ಲಿ ಅಡುಗೆ ಅನಿಲ ಸೋರಿಕೆ, ಅಗ್ನಿ ಅವಘಡದಿಂದ ಮನೆಗೆ ಹಾನಿ-House damaged due to cooking gas leak, fire in Tarikatte

House, damages

 


ಭದ್ರಾವತಿ ತಾಲ್ಲೂಕಿನ ತಳ್ಳಿಕಟ್ಟೆ ಗ್ರಾಮದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ.

ಗ್ರಾಮದ ಮನೆಯೊಂದರಲ್ಲಿ ರಾತ್ರಿ ಅಡುಗೆ ಮಾಡುವ ಸಮಯದಲ್ಲಿ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಇಡೀ ಮನೆಗೆ ಆವರಿಸಿಕೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ತಕ್ಷಣ ಹೊರಬಂದಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ, ಅಷ್ಟರಲ್ಲಾಗಲೇ ಮನೆ ಒಳಗಿದ್ದ ಪೀಠೋಪಕರಣಗಳು, ದವಸ ಧಾನ್ಯಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಭದ್ರಾವತಿಯ ಯುವ ಜೆಡಿಎಸ್ ಮುಖಂಡ ಅಜಿತ್ ಅಪ್ಪಾಜಿ ಅವರು ತಳ್ಳಿಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು‌.

https://www.suddilive.in/2026/05/NSUI-protests-demanding-dismissal-of-the-Centre.html


House damaged due to cooking gas leak, fire in Tarikatte

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close