SUDDILIVE || SHIVAMOGGA
ಮೇ 16 ರಂದು ಉದ್ಯೋಗ ನೇರ ಸಂದರ್ಶನ-Job direct interview on May 16th
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂinಪನಿಯಾದ 'ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈ. ಲಿ.' ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ ಮತ್ತು ಡಿಪ್ಲೊಮಾ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ತರತಕ್ಕದ್ದು.
ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606, 9108235132 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Job direct interview on May 16th
