SUDDILIVE || SHIVAMOGGA
ಬೆಂಕಿ ಅವಘಡಕ್ಕೆ ಒಳಗಾದ ಮನೆಗೆ ಶಾಸಕರ ಭೇಟಿ ಪರಿಶೀಲನೆ-MLA visits house that was hit by fire to inspect
ನಿನ್ನೆಯ ದಿನ ನಗರದ ವಾರ್ಡ್ ಸಂಖ್ಯೆ 27ರ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಹಲವಾರು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿತ್ತು. ಇಂದು ಬೆಳಿಗ್ಗೆ ಸದರಿ ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸಂಕಷ್ಟಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಅವಘಡದ ತೀವ್ರತೆಯನ್ನು ಗಮನಿಸಿ, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸಿಗಬೇಕಾದ ನಿಯಮಾನುಸಾರ ಗರಿಷ್ಠ ಪರಿಹಾರವನ್ನು ಹಾಗೂ ಅಗತ್ಯ ನೆರವನ್ನು ವಿಳಂಬವಿಲ್ಲದೆ ತಕ್ಷಣವೇ ತಲುಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮಾಜಿ ಕಾರ್ಪೊರೇಟರ್ ಆದ ಶ್ರೀ ವಿಶ್ವನಾಥ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, ಸ್ಥಳೀಯ ಪ್ರಮುಖರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
MLA visits house that was hit by fire to inspect
