SUDDILIVE || BANGLORE
ಸಚಿವ ಡಿ.ಸುಧಾಕರ್ ನಿಧನ-Minister D. Sudhakar passes away
ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿವೆ.
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
Minister D. Sudhakar passes away
