SUDDILIVE || SHIVAMOGGA
ಚಿನ್ನಾಭರಣ ದೋಚಿದ ಪ್ರಕರಣ, ಓರ್ವ ಬಂಧನ-One arrested in jewellery robbery case
ಅಬ್ಬಲಗೆರೆಯಲ್ಲಿ ಸ್ನೇಹಿತ ಮೂತ್ರವಿಸರ್ಜನೆಗೆ ತೆರಳಿದಾಗ ಇಕೋ ಸ್ಪೋರ್ಟ್ಸ ನಲ್ಲಿ ಬಂದ ಅಪರಿಚಿತರ ಗುಂಪೊಂದು ಚಿನ್ನಾಭರಣವನ್ನ ದೋಚಿಕೊಂಡು ಹೋದ ಪ್ರಕರಣದಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರು ಮತ್ತು 10 ಗ್ರಾಂ ಚಿನ್ನಾಭರವನ್ನ ವಶಕ್ಕೆ ಪಡೆದಿದ್ದಾರೆ.
ದಿನಾಂಕ::-22-05-2025 ರಂದು ಸಂಜೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಲಗೆರೆಯಿಂದ ಸ್ವಲ್ಪ ಮುಂದೆ ಯುವತಿಯೊಬ್ಬರು ಕಾರಿನಿಂದ ಕೆಳಗೆ ಇಳಿಯುತ್ತಿರುವಾಗ ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಅನ್ನು ಕಿತ್ತುಕೊಂಡು ಪರಾರಿಯಾದ ಬಗ್ಗೆ ಪ್ರಕರಣ ಠಾಣೆಯಲ್ಲಿ ದಾಖಲಾಗಿತ್ತು.
ಪ್ರಕರಣದಲ್ಲಿ ಆರೋಪಿ ಹಾಗೂ ಮಾಲು ಪತ್ತೆ ಬಗ್ಗೆ ನಿಖಿಲ್ ಬಿ. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ , ಕಾರಿಯಪ್ಪ. ಎ.ಜಿ* ಕೆ.ಎಸ್.ಪಿ.ಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-01 ಶಿವಮೊಗ್ಗ ಜಿಲ್ಲೆ ಶಿವಮೊಗ್ಗ, ಸಂಜೀವ್ ಕುಮಾರ್ ಟಿ ಡಿ.ವೈ.ಎಸ್.ಪಿ ಮಾನ್ಯ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪ ವಿಭಾಗ-ಬಿ ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ ಕಾಂಡಿಕೆ ಹಾಗೂ ಪಿ.ಎಸ್.ಐ ನವೀನ್ ಮಠಪತಿ & ಸಿಬ್ಬಂದಿಯವರಾದ, ಸಿಪಿಸಿ ಶ್ರೀಕಾಂತ್, ಕಾಶಿನಾಥ, ಕವನ ರವರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ತನಿಖಾ ತಂಡವು ಪ್ರಕರಣದ ಆರೋಪಿ ಮಂಜುನಾಥನಾಯ್ಕ ಈತನನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಉಪಯೋಗಿಸಿದ 5,00,000/- ಮೌಲ್ಯದ ಕಾರು, ಹಾಗೂ ಸುಮಾರು 150,000/-ರೂ ಬೆಲೆಬಾಳುವ 10 ಗ್ರಾಂ ತೂಕದ ಬಂಗಾರದ ಸರವನ್ನು ಅಮಾನತ್ತುಪಡಿಸಿಕೊಂಡು, ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತದೆ.
ಈ ಪತ್ತೆ ಕಾರ್ಯವನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐ.ಪಿ.ಎಸ್ ರವರು ಶ್ಲಾಘೀಸಿರುತ್ತಾರೆ.
One arrested in jewellery robbery case

