SUDDILIVE || SHIVAMOGGA
ಪೊಕ್ಸೋ-ಆರೋಪಿಗೆ 20 ವರ್ಷ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು- POCSO accused sentenced to 20 years in prison and fine
ಪೋಕ್ಸೋ ಕಾಯ್ದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿರುವ ನ್ಯಾಯಾಲಯ ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನಗದು ನೀಡಲು ಸೂಚಿಸಿದೆ.
ಶಿವಮೊಗ್ಗ ತಾಲೂಕಿನಲ್ಲಿ 2022ನೇ ಸಾಲಿನಲ್ಲಿ, 17 ವರ್ಷದ ನೊಂದ ಬಾಲಕಿ ಒಬ್ಬರಿಗೆ, 30 ವರ್ಷದ ಯುವಕನೊಬ್ಬನು ಲೈಂಗಿಕ ದೌರ್ಜನ್ಯ ನಡೆಸಿದ್ದರಿಂದ ಆಕೆಯು ಗರ್ಭಿಣಿಯಾಗಿರುತ್ತಾಳೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ತಿಪ್ಪೆಸ್ವಾಮಿ ಎಂ ಪಿ. ಐ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ, ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ ಪಾಟೀಲ್ ರವರು ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 2,00,000 ರೂ ದಂಡವನ್ನು ವಿಧಿಸಿ ಹಾಗೂ ನೊಂದ ಬಾಲಕಿಗೆ 1,80,000/- ರೂ ಪರಿಹಾರವನ್ನು ನೀಡಲು ಆದೇಶಿಸಿರುತ್ತಾರೆ.
POCSO accused sentenced to 20 years in prison and fine
