SUDDILIVE || SHIVAMOGGA
ಆರ್‌ಸಿಬಿ ಭರ್ಜರಿ ಗೆಲುವು: ಅಭಿಮಾನಿಗಳ ಸಂಭ್ರಮಾಚರಣೆ, ಪೊಲೀಸರು ನಿಯಂತ್ರಣ-Police struggled to disperse the crowd during the celebration
ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ತಂಡವು ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದರು.
ನಗರದ ಗೋಪಿ ವೃತ್ತದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಬೈಕ್‌ಗಳ ಆಕ್ಸಿಲೇಟರ್‌ಗಳನ್ನು ರೇಸ್ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು. ಮಲ್ಲಿಕಾರ್ಜುನ ಚಲನಚಿತ್ರ ಮಂದಿರ ಹಾಗೂ ದುರ್ಗಿಗುಡಿ ರಸ್ತೆಯಲ್ಲಿಯೂ ಯುವಕರು ಪಟಾಕಿ ಸಿಡಿಸಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದರು.
ಸಂಭ್ರಮಾಚರಣೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ದುರ್ಗಿಗುಡಿ ರಸ್ತೆಯಲ್ಲಿ ಸಂಭ್ರಮಾಚರಣೆಯನ್ನು ಸ್ಥಗಿತಗೊಳಿಸಲು ಪೊಲೀಸರು ಪ್ರಯತ್ನಿಸಿದ ವೇಳೆ ಕೆಲವರನ್ನು ಚದುರಿಸಿದರು.
ಆದರೂ, ಗೋಪಿ ವೃತ್ತದಲ್ಲಿ ಮತ್ತೆ ಕೆಲ ಅಭಿಮಾನಿಗಳು ಸೇರಿ ವಿಜಯೋತ್ಸವ ಮುಂದುವರಿಸಲು ಯತ್ನಿಸಿದರು. ಈ ವೇಳೆ ದೊಡ್ಡಪೇಟೆ ಪೊಲೀಸರು ಸ್ಥಳದಲ್ಲೇ ನಿಯೋಜನೆಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.
ಆರ್‌ಸಿಬಿ ತಂಡದ ಗೆಲುವು ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ನಗರದ ವಿವಿಧ ಭಾಗಗಳಲ್ಲಿ ಸಂಭ್ರಮದ ವಾತಾವರಣ ಕಂಡುಬಂತು. ಆರ್ ಸಿಬಿ ಎಂಬ ಘೋಷಣೆ ಮುಗಿಲುಮುಟ್ಟಿತ್ತು.
Police struggled to disperse the crowd during the celebration



