SUDDILIVE || SHIVAMOGGA
ಮೇ.09 ಮತ್ತು 10 ರಂದು ವಿದ್ಯುತ್ ವ್ಯತ್ಯಯ-Power outage on May 9th and 10th
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಗಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on May 9th and 10th
