SUDDILIVE || ANAVATTI
ಜಮೀನಿನಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ--ಆತ್ಮಹತ್ಯೆಯ ಸುತ್ತ ಅನುಮಾನದ ಹುತ್ತ-A young man committed suicide by hanging himself from a tree in his farm - suspicions surrounding the suicide
ಜಮೀನಿನಲ್ಲಿದ್ದ ಮರವೊಂದಕ್ಕೆ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈತನ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ಆನವಟ್ಟಿ ಹೋಬಳಿಯ ಕಾತೋಹಳ್ಳಿ ಗ್ರಾಮದ ಪ್ರಜ್ವಲ್ (29) ಎಂಬ ಯುವಕ ನಿನ್ನೆ ಜಮೀನೊಂದರಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣವೆಂದು ಕಂಡುಬಂದರೂ, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.
ಗ್ರಾಮದಲ್ಲಿ ತನಗೆ ಆಪ್ತವಾಗಿದ್ದ ಮಹಿಳೆಯೊಬ್ಬರು ಮತ್ತೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ ಮನನೊಂದು ಪ್ರಜ್ವಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾತುಗಳು ಸ್ಥಳೀಯರ ವಲಯದಲ್ಲಿ ಕೇಳಿಬರುತ್ತಿವೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಘಟನಾ ಸ್ಥಳಕ್ಕೆ ಆನವಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರಂಭದಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣವಾಗಿ ದಾಖಲಾಗಿದ್ದ ಈ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಪ್ರಜ್ವಲ್ ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿಂದಿನ ಸತ್ಯಾಂಶವನ್ನು ಪೊಲೀಸರು ತನಿಖೆಯ ಮೂಲಕ ಪತ್ತೆಹಚ್ಚಬೇಕಿದೆ.
A young man committed suicide by hanging himself from a tree in his farm - suspicions surrounding the suicide

