ಸುತ್ತುಕೋಟೆಯಲ್ಲಿ ಯುವಕನ ಭೀಕರ ಹತ್ಯೆ-A young man was brutally murdered in Suttukote

 SUDDILIVE || SHIVAMOGGA

ಸುತ್ತುಕೋಟೆಯಲ್ಲಿ ಯುವಕನ ಭೀಕರ ಹತ್ಯೆ-A young man was brutally murdered in Suttukote

Man, suttukote

ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುತ್ತುಕೋಟೆ ಗ್ರಾಮದ ಪ್ರವೀಣ್ (32) ಎಂದು ಗುರುತಿಸಲಾಗಿದೆ. ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು.

ನಿನ್ನೆ ಬೆಳಿಗ್ಗೆ ಕೆಲಸಕ್ಕೆ ಬರಲು ಕೆಲ ಯುವಕರಿಗೆ ತಿಳಿಸಿದ್ದರೂ, ಅವರು ಹಲವು ಬಾರಿ ಕರೆ ಮಾಡಿದರೂ ಪ್ರವೀಣ್ ಮೊಬೈಲ್ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಯುವಕರು ನೇರವಾಗಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಪ್ರವೀಣ್ ಅವರ ಮೃತದೇಹ ಮಚ್ಚಿನಿಂದ ಭೀಕರವಾಗಿ ಕೊಚ್ಚಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

A young man was brutally murdered in Suttukote

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close