SUDDILIVE || SHIVAMOGGA
ಎಲೆ ಕೀಳಲು ಹೋಗಿದ್ದ ಯುವಕ ವಿದ್ಯುತ್ ಸ್ಪರ್ಶಿಸಿ ದುರ್ಮರಣ- A young man who went to pick leaves died after being electrocuted
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪದಲ್ಲಿ ಮರವೊಂದರಿಂದ ಪಟ್ರೋಡೆ ತಯಾರಿಸಲು ಬಳಸುವ ಮರದ ಎಲೆ ಕೀಳಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಮೇಗರವಳ್ಳಿ ಕುರುಣಾಪುರದ ನಿವಾಸಿ ಅಭಿಷೇಕ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಮರದ ಮೇಲೆ ಹತ್ತಿದ್ದ ವೇಳೆ ಸಮೀಪದಲ್ಲೇ ಹಾದು ಹೋಗಿದ್ದ 11 ಕೆವಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಅಭಿಷೇಕ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
A young man who went to pick leaves died after being electrocuted
