ಅಂದರ್-ಬಾಹಾರ್ ಜೂಜಾಟ: 9 ಮಂದಿ ಪೊಲೀಸರ ಬಲೆಗೆ-Andar-Bahar gambling: 9 people caught by police

SUDDILIVE || SHIVAMOGGA

ಅಂದರ್-ಬಾಹಾರ್ ಜೂಜಾಟ: 9 ಮಂದಿ ಪೊಲೀಸರ ಬಲೆಗೆ-Andar-Bahar gambling: 9 people caught by police    

Andar, bahar

ಶಿವಮೊಗ್ಗ, ಜೂನ್ 2: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಜೂನ್ 1ರ ಸಂಜೆ, ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರಂಟ್ ಪಡೆದು, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿತು.

ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಜೂಜಾಟಕ್ಕೆ ಬಳಸಲಾಗಿದ್ದ ₹33,470 ನಗದು, 8 ಮೊಬೈಲ್ ಫೋನ್‌ಗಳು ಹಾಗೂ ಇಸ್ಟೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಆರೋಪಿತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026ರ ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಹಾಗೂ 80ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Andar-Bahar gambling: 9 people caught by police

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close