SUDDILIVE || SHIVAMOGGA
ಸರಣಿ ಮನೆ ಕಳ್ಳತನದ ಆರೋಪಿ ಅಂದರ್- Andar, accused of serial house burglaries
ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಹಗಲು ಮನೆ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ಶಿವಮೊಗ್ಗ-ಎ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಲಾಗಿತ್ತು.
ತನಿಖೆ ವೇಳೆ ಮಲ್ಲಿಗೇನಹಳ್ಳಿ, ಶ್ರೀರಾಮಪುರ ಹಾಗೂ ವಾಜಪೇಯಿ ಬಡಾವಣೆಯಲ್ಲಿ ಹಗಲು ವೇಳೆ ಮನೆಗಳ ಕಳ್ಳತನ ನಡೆಸುತ್ತಿದ್ದ ಆರೋಪಿತ (33)ನನ್ನು ಜೂನ್ 12ರಂದು ವಶಕ್ಕೆ ಪಡೆಯಲಾಗಿದೆ.
ಬಂಧಿತನ ವಿಚಾರಣೆಯಲ್ಲಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು ಆರು ಮನೆ ಕಳ್ಳತನ ಪ್ರಕರಣಗಳಲ್ಲಿ ಆತನ ಕೈವಾಡ ಬೆಳಕಿಗೆ ಬಂದಿದೆ. ಆರೋಪಿಯಿಂದ ಅಂದಾಜು 6 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ 25 ಸಾವಿರ ರೂ. ಮೌಲ್ಯದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಯಶಸ್ವಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದ ತುಂಗಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್, ಪಿಎಸ್‌ಐ ರಘುವೀರ ಎಂ., ಪಿಎಸ್‌ಐ ಮಂಜಮ್ಮ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿ ಅಭಿನಂದಿಸಿದ್ದಾರೆ.
Andar, accused of serial house burglaries

