ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಹಲವು ಜನಪ್ರತಿನಿಧಿಗಳಿಗೆ ಮನವಿ- Appeal to several representatives not to grant electricity distribution license to Tata Power

 SUDDILIVE || SHIVAMOGGA

ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಹಲವು ಜನಪ್ರತಿನಿಧಿಗಳಿಗೆ ಮನವಿ- Appeal to several representatives not to grant electricity distribution license to Tata Power     

Tata, Power

Tata, Power

Tata, Power

ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಪ್ರವೇಶಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಅಧಿಕಾರಿಗಳು ಹಾಗೂ ನೌಕರರ ಒಕ್ಕೂಟವು ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ, ಸಂಸದ ರಾಘವೇಂದ್ರ, ಸೂಡ ಅಧ್ಯಕ್ಷ ಸುಂದರೇಶ್ ಅವರಿಗೆ ಮನವಿ ಸಲ್ಲಿಸಿದೆ.

ರಾಜ್ಯದ ಬೆಸ್ಕಾಂ, ಜೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕಾಂ ವ್ಯಾಪ್ತಿಯ 19 ಜಿಲ್ಲೆಗಳಲ್ಲಿ ಟಾಟಾ ಪವರ್ ವಿದ್ಯುತ್ ವಿತರಣೆ ಮಾಡಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಒಕ್ಕೂಟ ತಿಳಿಸಿದೆ. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಬಾರದು ಎಂಬುದು ಸರ್ಕಾರದ ನಿಲುವಾಗಿದ್ದರೂ, ಇದೀಗ ಟಾಟಾ ಪವರ್ ಅರ್ಜಿ ಸಲ್ಲಿಸಿರುವುದು ನೌಕರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆ ಈಗಾಗಲೇ ಗ್ರಾಮೀಣ ವಿದ್ಯುದೀಕರಣ, ರೈತರಿಗೆ ಉಚಿತ ಅಥವಾ ರಿಯಾಯಿತಿ ವಿದ್ಯುತ್, ಭಾಗ್ಯಜ್ಯೋತಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಇಂತಹ ಸೇವಾ ಕ್ಷೇತ್ರಕ್ಕೆ ಖಾಸಗಿ ಸಂಸ್ಥೆ ಪ್ರವೇಶಿಸಿದರೆ ಸರ್ಕಾರದ ನಿಯಂತ್ರಣ ಕಡಿಮೆಯಾಗುವ ಜೊತೆಗೆ ಗ್ರಾಹಕರಿಗೆ ದರಭಾರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಒಕ್ಕೂಟ ಎಚ್ಚರಿಸಿದೆ.

ಖಾಸಗಿ ಸಂಸ್ಥೆಗಳಿಗೆ ಅವಕಾಶ ನೀಡಿದರೆ ರೈತರು, ಗ್ರಾಹಕರು ಹಾಗೂ ವಿದ್ಯುತ್ ನೌಕರರ ಹಿತಾಸಕ್ತಿಗೆ ಧಕ್ಕೆ ಉಂಟಾಗಬಹುದು. ಅಲ್ಲದೆ ಉದ್ಯೋಗ ಭದ್ರತೆಗೂ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ವಿದ್ಯುತ್ ಕಾಯ್ದೆ–2003ರ ಸೆಕ್ಷನ್ 108ರ ಅಡಿಯಲ್ಲಿ ಸರ್ಕಾರ ಮಧ್ಯಪ್ರವೇಶಿಸಿ, ಟಾಟಾ ಪವರ್ ಕಂಪನಿಯ ಪರವಾನಗಿ ಅರ್ಜಿಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒಕ್ಕೂಟವು ವಿಜಯೇಂದ್ರರಿಗೆ ಮನವಿ ಮಾಡಿದೆ.

Appeal to several representatives not to grant electricity distribution license to Tata Power

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close