SUDDILIVE || SHIVAMOGGA
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ-Applications invited for the post of Guest Teacher
2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ 8 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಕನ್ನಡ, ಇಂಗ್ಲೀಷ್, ಗಣಿತ, ವಿಜ್ಞಾನ, ಹಿಂದಿ, ಸಮಾಜವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪಿ.ಯು.ಸಿ., ಡಿ.ಇಡಿ ಮತ್ತು ಟಿಇಟಿ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಎ/ಬಿಎಸ್ಸಿ, ಬಿ.ಇಡಿ ಹಾಗೂ ಟಿಇಟಿ ವಿದ್ಯಾರ್ಹತೆ ಕಡ್ಡಾಯವಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 10 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
Applications invited for the post of Guest Teacher

