SUDDILIVE | THIRTHAHALLI
ಅಕ್ರಮ ಬಂದೂಕು ತಯಾರಿಸುತ್ತಿದ್ದವನ ಬಂಧನ-Arrest of man who was making illegal firearms
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಲಾಪುರ ಎಂಬಲ್ಲಿ ಪೊಲೀಸರು ದಾಳಿ ನಡೆಸಿದ್ದು ದಾಳಿಯಲ್ಲಿ ಸುಧಾಕರ್ ಆಚಾರಿ (56) ಎಂಬಾತನನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ದೇಶೀ ನಿರ್ಮಿತ ಬಂದೂಕನ್ನು (ಕೋವಿ)ವಶಕ್ಕೆ ಪಡೆದಿದ್ದಾರೆ.
ಅಕ್ರಮ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಜೂನ್ 20, 2026ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ ಒಂದು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ. ಶಸ್ತ್ರಾಸ್ತ್ರವನ್ನು ಯಾವುದೇ ಪರವಾನಗಿ ಇಲ್ಲದೆ ಹೊಂದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಲೆನಾಡ ಭಾಗದಲ್ಲಿ ಬಂದೂಕು ರಿಪೇರಿ ಮಾಡಿಕೊಡುತ್ತಿದ್ದ ಆರೋಪಿ ಸುಧಾಕರ್ ನಂತರ ಅಕ್ರಮ ಬಂದೂಕು ತಯಾರಿಕೆಯಲ್ಲಿ ತೊಡಗಿದ್ದ. ಬಂದೂಕುಗಳ ಶಬ್ದ ಮಲೆನಾಡಿನಲ್ಲಿ ಕಂಪಿಸುತ್ತಿರುವಾಗಲೆ ಆತನ ಬಂಧನ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಅಕ್ರಮವಾಗಿ ಶಸ್ತ್ರಾಸ್ತ್ರವನ್ನು ಹೊಂದಿದ್ದ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ಅಕ್ರಮವಾಗಿ ಬಂದೂಕು ಅಥವಾ ಇತರೆ ಶಸ್ತ್ರಾಸ್ತ್ರಗಳನ್ನು ಹೊಂದುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತೀರ್ಥಹಳ್ಳಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ತಮ್ಮ ಸುತ್ತಮುತ್ತ ಅಕ್ರಮ ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.
Arrest of man who was making illegal firearms

