SUDDILIVE || SHIVAMOGGA
ರಸ್ತೆ ಬ್ಲಾಕ್ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಟೋ ಚಾಲಕರ ಮತ್ತು ಮಾಲೀಕರ ಪ್ರತಿಭಟನೆ-Auto drivers and owners protest in front of the District Collector's office by blocking the road
ಶಿವಮೊಗ್ಗ, ಜೂನ್ 18: ನಗರದ ಆಟೋ ಚಾಲಕರ ಜೀವನೋಪಾಯಕ್ಕೆ ಧಕ್ಕೆಯಾಗುವ ಕೆಲವು ಬೆಳವಣಿಗೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಟೋ ನಿಲ್ಲಿಸಿ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸಂಘದ ಪದಾಧಿಕಾರಿಗಳು ನೀಡಿದ ಮನವಿಯಲ್ಲಿ, ನಗರದಲ್ಲಿ ಆಟೋ ಚಾಲಕರಿಗೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಗಮನ ಸೆಳೆದು, ನಿಯಮಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಂತೆ ಹಾಗೂ ಆಟೋ ಚಾಲಕರ ಹಿತಾಸಕ್ತಿಯನ್ನು ರಕ್ಷಿಸುವಂತೆ ಕೋರಲಾಗಿದೆ.
ಮನವಿಯಲ್ಲಿ ಪ್ರಮುಖವಾಗಿ ಆಟೋ ನಿಲ್ದಾಣಗಳಲ್ಲಿ ಶಿಸ್ತು ಕಾಪಾಡುವುದು, ಅನಧಿಕೃತ ವಾಹನಗಳ ಸಂಚಾರವನ್ನು ನಿಯಂತ್ರಿಸುವುದು, ಆಟೋ ಚಾಲಕರಿಗೆ ಕಿರುಕುಳ ಉಂಟಾಗದಂತೆ ನೋಡಿಕೊಳ್ಳುವುದು, ಹೊಸ ಆಟೋಗಳಿಗೆ ಪರ್ಮಿಟ್ ಸೇರಿದಂತೆ ಹಲವು ಬೇಡಿಕೆಗಳನ್ನು ಉಲ್ಲೇಖಿಸಲಾಗಿದೆ.
ನಗರದ ಸಂಚಾರ ವ್ಯವಸ್ಥೆ ಸುಗಮವಾಗಿರಲು ಹಾಗೂ ಆಟೋ ಚಾಲಕರಿಗೆ ನ್ಯಾಯಸಮ್ಮತ ಅವಕಾಶ ದೊರಕಲು ಸಂಬಂಧಿಸಿದ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
ಮನವಿಗೆ ಸಂಘದ ಅಧ್ಯಕ್ಷರಾದ ಅಲ್ಲಬಕ್ಷಿ, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳು ಭಾಗಿಯಾಗಿದ್ದರು.
Auto drivers and owners protest in front of the District Collector's office by blocking the road


