SUDDILIVE || SHIVAMOGGA
ಶಿವಮೊಗ್ಗದಲ್ಲಿ ನೀಟ್ ರದ್ದು, ಸಿಇಟಿ ಜಾರಿಗೆ ಆಗ್ರಹಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ- Congress to protest tomorrow in Shivamogga demanding cancellation of NEET and implementation of CET
ಶಿವಮೊಗ್ಗ: ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯದಲ್ಲಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್‌ಎಸ್‌ಯುಐ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎನ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ನೀಟ್ ಮರುಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಎದುರಿಸಿದ ಸಮಸ್ಯೆಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಉಂಟಾದ ಅನ್ಯಾಯವನ್ನು ಜನರಿಗೆ ತಿಳಿಸಲಾಗಿದೆ ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ಹಾಗೂ ಕೇಂದ್ರ ಶಿಕ್ಷಣ ಸಚಿವ ವಿದ್ಯಾರ್ಥಿಗಳ ಪರವಾಗಿ ಸ್ಪಷ್ಟ ಹೇಳಿಕೆ ನೀಡಿಲ್ಲ ಎಂದು ಆರೋಪಿಸಿದರು.
ಈ ಹಿಂದೆ ಸಿಇಟಿ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಅದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ನೀಟ್‌ಗೆ ಸಂಬಂಧಿಸಿದ ಸಮಸ್ಯೆಗಳು ಇದೇ ಮೊದಲಲ್ಲ, ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ಹೇಳಿದರು.
ನಾಳೆ ಬೆಳಗ್ಗೆ ಸೈನ್ಸ್ ಮೈದಾನದಿಂದ ಪ್ರತಿಭಟನೆ ಆರಂಭವಾಗಿ, ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ನಡೆಯಲಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ಅದನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ಈ ವಿಷಯದ ಕುರಿತು ಸಾರ್ವಜನಿಕವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.
ಕೂಡಲೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯದಲ್ಲಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ ಅವರು, ಪ್ರತಿಭಟನೆಯಲ್ಲಿ ಸಚಿವ , ಮಾಜಿ ಸಚಿವ , ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದು, ಸುಮಾರು 10 ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರವಿಕುಮಾರ್, ಹಾಲಪ್ಪ, ಶಿವಾನಂದ, ದೇವೇಂದ್ರಪ್ಪ, ವಿಜಯ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
