SUDDILIVE || SHIVAMOGGA
ಶಿವಮೊಗ್ಗದಲ್ಲಿ ವಿದ್ಯುತ್ ಶಾಕ್‌ಗೆ ಬೀಡಾಡಿ ಹಸು ಬಲಿ; ಕರು ರಕ್ಷಣೆ-Cow dies after being electrocuted in Shivamogga; calf rescued
ಶಿವಮೊಗ್ಗ: ನಗರದ ಕೋಟೆ ಮಾರಿಕಾಂಬಾ ದೇವಸ್ಥಾನದ ಪಕ್ಕದ ಅಶೋಕ ರಸ್ತೆಯಲ್ಲಿ ವಿದ್ಯುತ್ ಶಾಕ್‌ನಿಂದ ಬೀಡಾಡಿ ಹಸುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಹಸು ಸುತ್ತಲೂ ಇತರೆ ಹಸುಗಳು ಕೂಗಾಡುತ್ತಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಕೂಡಲೇ ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ತಾಯಿಯನ್ನ ಕಳೆದುಕೊಂಡ ಕರುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಹಸುವನ್ನು ಉಳಿಸಲು ಸಾಧ್ಯವಾಗಿಲ್ಲ.
ಘಟನೆ ಸಂಬಂಧ ಸ್ಥಳೀಯ ನಿವಾಸಿ ಕೋಟೆ ರಾಜು ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೃತ ಹಸುವನ್ನು ಸದ್ಯ ಮಹಾವೀರ ಗೋಶಾಲೆಗೆ ಸ್ಥಳಾಂತರಿಸಲಾಗಿದ್ದು, ಹಸುವಿನ ಮೃತದೇಹದ ಪೋಸ್ಟ್‌ಮಾರ್ಟಂ ನಡೆಸಲಾಗುವುದು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಭರವಸೆ ನೀಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
