ಡಿ.ಕೆ. ಶಿವಕುಮಾರ್ ಸಿಎಂ ಪದಗ್ರಹಣ: ಶಿವಮೊಗ್ಗದಲ್ಲಿ ಸಂಭ್ರಮಾಚರಣೆ- D.K. Shivakumar takes oath as CM: Celebrations in Shivamogga

 SUDDILIVE || SHIVAMOGGA

ಡಿ.ಕೆ. ಶಿವಕುಮಾರ್ ಸಿಎಂ ಪದಗ್ರಹಣ: ಶಿವಮೊಗ್ಗದಲ್ಲಿ ಸಂಭ್ರಮಾಚರಣೆ-  D.K. Shivakumar takes oath as CM: Celebrations in Shivamogga  

Dkshivkumar, pdo

ಶಿವಮೊಗ್ಗ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಶಿವಮೊಗ್ಗ ನಗರದಲ್ಲೂ ಅಭಿಮಾನಿಗಳು ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಪದಗ್ರಹಣ ಸಮಾರಂಭದ ನೇರ ಪ್ರಸಾರವನ್ನು ನಗರದ ಶಿವಪ್ಪ ನಾಯಕ ವೃತ್ತ ಹಾಗೂ ಮಂಜುನಾಥ ಚಿತ್ರಮಂದಿರದಲ್ಲಿ ಅಳವಡಿಸಲಾದ ಬೃಹತ್ ಎಲ್‌ಇಡಿ ಪರದೆಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಇದನ್ನು ವೀಕ್ಷಿಸಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಇಂದು ಬೆಳಿಗ್ಗೆ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ಅವರ ನೇತೃತ್ವದಲ್ಲಿ ಶಿವಪ್ಪ ನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಬಳಿಕ ಅನ್ನಸಂತರ್ಪಣೆ ಹಾಗೂ ಹಯಗ್ರೀವ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.



ಇನ್ನೊಂದೆಡೆ, ಒಕ್ಕಲಿಗರ ಒಕ್ಕೂಟದ ವತಿಯಿಂದ ಶರಾವತಿ ನಗರದ ಆದಿಚುಂಚನಗಿರಿ ಶಾಲಾ ಆವರಣದಲ್ಲಿರುವ ಕಾಳಭೈರವೇಶ್ವರ ದೇವಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರು 101 ಈಡಗಾಯಿಗಳನ್ನು ಒಡೆದು ದೇವರಿಗೆ ಅರ್ಪಿಸಿ ಶುಭ ಹಾರೈಸಿದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಅಭಿಮಾನಿಗಳ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ.

D.K. Shivakumar takes oath as CM: Celebrations in Shivamogga

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close