ಉಪ್ಪಾರ ಸಮಾಜದ ಏಕೈಕಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಮತ್ತು ಶಿವಮೊಗ್ಗಕ್ಕೆ ಒಂದು MLC ಸ್ಥಾನಕ್ಕೆ ಆಗ್ರಹ- Demand for a ministerial post for Uppara Samaj's sole MLA C. Puttarangashetty and an MLC post for Shivamogga

SUDDILIVE || SHIVAMOGGA

ಉಪ್ಪಾರ ಸಮಾಜದ ಏಕೈಕಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಮತ್ತು ಶಿವಮೊಗ್ಗಕ್ಕೆ ಒಂದು MLC ಸ್ಥಾನಕ್ಕೆ ಆಗ್ರಹ- Demand for a ministerial post for Uppara Samaj's sole MLA C. Puttarangashetty and an MLC post for Shivamogga    

Ministrial, puttrangashetty



ಶಿವಮೊಗ್ಗ, ಜೂ. 2: ರಾಜ್ಯದಲ್ಲಿ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಉಪ್ಪಾರ ಸಮುದಾಯಕ್ಕೆ ನ್ಯಾಯ ದೊರಕುವ ನಿಟ್ಟಿನಲ್ಲಿ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಪ್ಪಾರ ಯುವ ಘಟಕದ ಅಧ್ಯಕ್ಷ ಮುರಳಿ ಹೆಚ್. ಸಣ್ಣಕ್ಕಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ವಿಧಾನಸಭೆಯಲ್ಲಿ ಉಪ್ಪಾರ ಸಮುದಾಯದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಆಗಿದ್ದು, ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸುಮಾರು 33 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ್ಪಾರ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ. ಆದರೂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ದೊರಕದಿರುವುದು ಸಮುದಾಯದ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಉಪ್ಪಾರ ಸಮುದಾಯಕ್ಕೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿ ಮತ ಪಡೆದಿದ್ದರೂ, ಕಳೆದ ಬಾರಿ ಸಚಿವ ಸ್ಥಾನ ನೀಡಲು ನಿರಾಕರಿಸಲಾಗಿತ್ತು. ಈ ಬಾರಿಯಾದರೂ ಸಮುದಾಯದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿರಿಯ ನಾಯಕತ್ವ ಹೊಂದಿರುವ ಅವರಿಗೆ ಸಚಿವ ಸ್ಥಾನ ನೀಡುವುದು ಸಮಂಜಸ ಎಂದು ಹೇಳಿದ್ದಾರೆ.

ಒಂದು ವೇಳೆ ಉಪ್ಪಾರ ಸಮುದಾಯದ ಬೇಡಿಕೆಯನ್ನು ಪರಿಗಣಿಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಪ್ಪಾರ ಯುವ ಘಟಕ, ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಯುವ ಘಟಕದ ಉಪಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಉಪ್ಪಾರ ಸಂಘದ ನಿರ್ದೇಶಕರಾಗಿರುವ ಮುರಳಿ ಹೆಚ್. ಸಣ್ಣಕ್ಕಿ ಈ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ


Demand for a ministerial post for Uppara Samaj's sole MLA C. Puttarangashetty and an MLC post for Shivamogga 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close