ಶಾಸಕ‌ ಬೇಳೂರಿಗೆ ಡಿಸಿಎಂ ಸ್ಥಾನ ನೀಡುವಂತೆ, ಎಂ ಆರ್ ಸೀತಾರಾಮ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ-Demand to give DCM post to MLA Belur, minister post to MR Sitaram

SUDDILIVE || SHIVAMOGGA

ಶಾಸಕ‌ ಬೇಳೂರಿಗೆ ಡಿಸಿಎಂ ಸ್ಥಾನ ನೀಡುವಂತೆ, ಎಂ ಆರ್ ಸೀತಾರಾಮ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ-Demand to give DCM post to MLA Belur, minister post to MR Sitaram     

Mla, demand

Mla demand


ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಲಿಜ ಸಮಾಜದ ಮುಖಂಡರಾದ ಎಂ.ಆರ್. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತ್ಯೇಕ ಸುದ್ದಿಗೋಷ್ಠಿಗಳ ಮೂಲಕ ಆಗ್ರಹಿಸಿದ್ದಾರೆ.

ಮೊದಲಿಗೆ ಜಿಲ್ಲಾ ಬಲಿಜ ಸಮಾಜದ ಅಧ್ಯಕ್ಷ ಎಸ್.ಎಂ. ವೆಂಕಟೇಶ್ ಮಾತನಾಡಿ, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಬಲಿಜ ಸಮಾಜಕ್ಕೆ ಸರ್ಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗಬೇಕಿದ್ದು, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೂ ಅವಕಾಶ ನೀಡಿದರೆ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ಹೇಳಿದರು.

ಇನ್ನೊಂದೆಡೆ, ಸಾಗರ-ಹೊಸನಗರ ಭಾಗದ ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡ ಬಿ.ಆರ್. ಜಯಂತ್ ಮಾತನಾಡಿ, ಗೋಪಾಲಕೃಷ್ಣ ಬೇಳೂರು, ಮಧು ಬಂಗಾರಪ್ಪ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಜಿಲ್ಲೆಯಲ್ಲಿ ಜಾತ್ಯಾತೀತ ಸಿದ್ಧಾಂತದ ರಾಜಕಾರಣವನ್ನು ಬಲಪಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಈಗಾಗಲೇ ಮೂರು ವರ್ಷಗಳ ಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಒಂದೇ ಅವಕಾಶ ಇದ್ದರೆ ಅದು ಗೋಪಾಲಕೃಷ್ಣ ಬೇಳೂರಿಗೆ ಸಿಗಬೇಕು ಎಂದು ಹೇಳಿದರು.

ಬೇಳೂರು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣುವ ನಾಯಕರು. ಸಾಗರ ಮತ್ತು ಹೊಸನಗರ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಂದಲೂ ಬೇಳೂರು ಪರವಾಗಿ ಬಹಿರಂಗ ಹೇಳಿಕೆ ಪಡೆಯಬಹುದಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಯಂತ್, ಬೇಳೂರು ಪರವಾಗಿ ಸಾಗರದಲ್ಲಿ ಪೂಜೆ ಸಲ್ಲಿಸಿ ಹಕ್ಕು ಮಂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಅದೇ ವೇಳೆ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಪಾಲಕೃಷ್ಣ ಬೇಳೂರು ಅವರು ಅಲ್ಲಿ ಸಾಧನೆ ಮಾಡಿಲ್ಲ ಎಂಬ ಪ್ರಶ್ನೆಗೆ ಮುಖಂಡರು ಸ್ಪಷ್ಟ ಉತ್ತರ ನೀಡಲು ತಡಬಡಾಯಿಸಿದ ಘಟನೆ ಸುದ್ದಿಗೋಷ್ಠಿಯಲ್ಲಿ ಗಮನ ಸೆಳೆಯಿತು. ಬೇಳೂರು ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಹೇಳಿದರೂ, ಅದಕ್ಕೆ ಸಂಬಂಧಿಸಿದ ದಾಖಲೆ ಅಥವಾ ಪಕ್ಷದ ಹಿರಿಯ ನಾಯಕರ ಅಭಿಪ್ರಾಯವನ್ನು ಅವರು ಉಲ್ಲೇಖಿಸಲಿಲ್ಲ.

Demand to give DCM post to MLA Belur, minister post to MR Sitaram

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close