ದಿಡೀರ್ ಬೆಂಕಿ ಲಾರಿ ಮುಂಭಾಗ ಕರಕಲು- Didier fire engulfed the front of the lorry

SUDDILIVE || SHIKARIPURA

ದಿಡೀರ್ ಬೆಂಕಿ ಲಾರಿ ಮುಂಭಾಗ ಕರಕಲು- Didier fire engulfed the front of the lorry    

Engulfed, fire

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದು ಚಲಿಸುತ್ತಿರುವಾಗಲೇ ಏಕಾಏಕಿ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು, ಲಾರಿಯ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ನಡೆದಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಮಹಮ್ಮದ್ ಹುಸೇನ್ ಸಮಯಪ್ರಜ್ಞೆ ಪ್ರದರ್ಶಿಸಿ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೆರವು ನೀಡಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದರೆ ಅಷ್ಟರಲ್ಲಾಗಲೇ ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಸಿಎಂ (ECM) ದೋಷದಿಂದ ಇಂಜಿನ್ಗೆ ಬೆಂಕಿ ಹೊತ್ತಿಕೊಂಡಿರ ಬಹುದು ಎಂದು ಅಂದಾಜಿಸಲಾಗಿದೆ.

Didier fire engulfed the front of the lorry    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close