SUDDILIVE || SHIVAMOGGA
ಗೂಡಂಗಡಿಗಳಲ್ಲಿ ಎಣ್ಣೆ ಮಾರಾಟಕ್ಕೆ ಜಿಲ್ಲಾ ಮಹಿಳಾ ಒಕ್ಕೂಟ ಆಕ್ಷೇಪ-District Women's Union objects to sale of liquor in stalls
ಶಿವಮೊಗ್ಗ : ಹಳ್ಳಿಗಳಲ್ಲಿ ಮನೆ ಮತ್ತು ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾಡುತ್ತಿದ್ದು, ಕೂಡಲೇ ಇದನ್ನು ನಿಷೇಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅರುಣೋದಯ ಮಹಿಳಾ ಜಿಲ್ಲಾ ಒಕ್ಕೂಟ ಶಿವಮೊಗ್ಗದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಹಿಂದೆಯೂ ಫೆಬ್ರವರಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಆಗುತ್ತಿರುವ ಅಕ್ರಮ ಮದ್ಯಮಾರಾಟದ ಬಗ್ಗೆ ಮನವಿ ನೀಡಿದ್ದೇವು. ಆದರೂ ಕೂಡ ಜಿಲ್ಲಾಡಳಿತದಿಂದ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾಧನೀಯವಾಗಿದೆ. ಮದ್ಯ ಮಾರಾಟದಿಂದ ಮಹಿಳೆಯರು, ಮಕ್ಕಳು ಹಾಗೂ ಕುಟುಂಬದವರು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೌಟುಂಬಿಕ ಹಿಂಸಾಚಾರ, ಆರ್ಥಿಕ ಸಂಕಷ್ಟ, ಆರೋಗ್ಯ ಸಮಸ್ಯೆಗಳು ಹಾಗೂ ಸಾಮಾಜಿಕ ಅಶಾಂತಿ ಹೆಚ್ಚಾಗುತ್ತಿದೆ. ಜಿಲ್ಲೆಯ ತಟ್ಟೆಹಳ್ಳಿ, ಕೋಡಿಹೊಸೂರು, ಅರಹತೊಳಲು, ಬಿ.ಬೀರನಹಳ್ಳಿ ಮುಂತಾದ ಗ್ರಾಮಗಳಲ್ಲಿ ಎಗ್ಗಿಲ್ಲದೆ ಮದ್ಯಮಾರಾಟ ನಡೆಯುತ್ತಿದ್ದು, ಈ ಬಗ್ಗೆ ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೂ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ತುರ್ತು ಗಮನಹರಿಸಿ ಅಕ್ರಮ ಹಾಗೂ ಕಾನೂನುಬದ್ಧ ಮದ್ಯಮಾರಾಟ ಕೇಂದ್ರಗಳ ಪರಿಶೀಲನೆ ನಡೆಸಿ, ಅಕ್ರಮ ಮದ್ಯಮಾರಾಟ ನಿಯಂತ್ರಣಕ್ಕೆ ಹಾಗೂ ನಿಷೇಧಕ್ಕೆ ಅಗತ್ಯಕ್ರಮ ಕೈಗೊಳ್ಳುವಂತೆ ಒಕ್ಕೂಟ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗಂಗಾ, ಕಾರ್ಯದರ್ಶಿ ಶಕುಂತಲಾ, ಪ್ರಮುಖರಾದ ವಸಂತಕುಮಾರಿ, ನಿಶ್ಚಿತ, ಆಶಾ, ಸರೋಜಾ, ವೆಳ್ಳಮ್ಮ, ಕವಿತಾ ರಾಘವೇಂದ್ರ ಮತ್ತಿತರರಿದ್ದರು.
District Women's Union objects to sale of liquor in stalls
