ಡಾಲರ್ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ- Dollar brothers attacked with deadly weapons

 SUDDILIVE || SHIVAMOGGA

ಡಾಲರ್ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ-  Dollar brothers attacked with deadly weapons  

ಟಿಪ್ಪುನಗರದಲ್ಲಿ ಮನೆಗೆ ನುಗ್ಗಿ ಹಲ್ಲೆ, ಇಬ್ಬರು ಮೆಗ್ಗಾನ್ ಆಸ್ಪತ್ರೆಗೆ ದಾಖಲು
Dollar, brother




ಶಿವಮೊಗ್ಗ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಯುವಕರ ಗುಂಪೊಂದು ಇಬ್ಬರು ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಟಿಪ್ಪುನಗರದ 5ನೇ ತಿರುವಿನಲ್ಲಿ ಇಂದು ಸಂಜೆ ನಡೆದಿದೆ.

ಗಾಯಾಳುಗಳನ್ನು ಕಾರ್ ಡೀಲರ್ ರಹಮತ್ ಉಲ್ಲಾ ಹಾಗೂ ಅವರ ಸಹೋದರ ನ್ಯಾಮತ್ ಉಲ್ಲಾ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ರಹಮತ್ ಉಲ್ಲಾ ಅವರ ಬಲ ಭುಜದ ಭಾಗಕ್ಕೆ ಭರ್ಚಿಯಿಂದ ಇರಿದ ಪರಿಣಾಮ ಗಂಭೀರ ಗಾಯಗಳಾಗಿದ್ದು, ನ್ಯಾಮತ್ ಉಲ್ಲಾ ಅವರ ಎಡಗೈಗೆ ಗಾಯವಾಗಿದೆ.

ಘಟನೆಯ ಬಳಿಕ ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರೀತಿ ಸಂಬಂಧಿತ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಆರೋಪಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದವರು ಅದೇ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ದಾಳಿಗೆ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Dollar brothers attacked with deadly weapons 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close