ಅರ್ಬನ್ ನಕ್ಸಲರ ರೀತಿ ವರ್ತಿಸಬೇಡಿ, ರಾಜ್ಯದ ಜನರ ಕ್ಷಮೆ ಕೇಳಿ-ಈಶ್ವರಪ್ಪ ಕಿವಿ ಮಾತು-Don't behave like urban Naxals, ask for forgiveness from the people of the state - Eshwarappa argues

 SUDDILIVE || SHIVAMOGGA

ಅರ್ಬನ್ ನಕ್ಸಲರ ರೀತಿ ವರ್ತಿಸಬೇಡಿ, ರಾಜ್ಯದ ಜನರ ಕ್ಷಮೆ ಕೇಳಿ-ಈಶ್ವರಪ್ಪ ಕಿವಿ ಮಾತು-Don't behave like urban Naxals, ask for forgiveness from the people of the state - Eshwarappa argues   

Urban, naxal

ಶಿವಮೊಗ್ಗ: ಆರ್‌ಎಸ್‌ಎಸ್‌ (RSS) ಕುರಿತು ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಜ್ಯ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನದ ಅನುಚ್ಛೇದ 19(1)(ಸಿ) ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಭೂತ ಹಕ್ಕು ಇದೆ. ಯಾವುದೇ ಸಂಸ್ಥೆ ಕಡ್ಡಾಯವಾಗಿ ನೋಂದಣಿ ಮಾಡಲೇಬೇಕು ಎಂಬ ನಿಯಮ ಇಲ್ಲ. ಈ ವಿಚಾರ ತಿಳಿದಿದ್ದರೂ ಆರ್‌ಎಸ್‌ಎಸ್‌ ವಿರುದ್ಧ ನಿರಂತರವಾಗಿ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಆರ್‌ಎಸ್‌ಎಸ್‌ ಕುರಿತು ಹಿರಿಯ ವಕೀಲರು ಹಾಗೂ ಕಾನೂನು ತಜ್ಞರು ನೀಡಿರುವ ಅಭಿಪ್ರಾಯಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಪ್ರಶ್ನೆಗಳಿಗೆ ಉತ್ತರ ನೀಡುವ ವಕೀಲರನ್ನು ‘ಗುಲಾಮರು’ ಎಂದು ಕರೆಯುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಗೃಹ ಸಚಿವರು ಅಥವಾ ಸರ್ಕಾರಕ್ಕೆ ಆರ್‌ಎಸ್‌ಎಸ್‌ ಬಗ್ಗೆ ಯಾವುದೇ ಕಾನೂನು ಆಕ್ಷೇಪಣೆ ಇದ್ದರೆ, ಕಾನೂನು ಪ್ರಕಾರ ನೋಟಿಸ್ ನೀಡಲಿ, ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಸಾರ್ವಜನಿಕವಾಗಿ ಅವಹೇಳನಕಾರಿ ಭಾಷೆ ಬಳಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್‌ ದೇಶಭಕ್ತಿ ಬೆಳೆಸುವ ಸಂಘಟನೆಯಾಗಿದ್ದು, ದೇಶ-ವಿದೇಶಗಳಲ್ಲಿ ಅದರ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಹಾಗೂ ತಮ್ಮ ಪಕ್ಷದ ಹೈಕಮಾಂಡ್‌ ಮೆಚ್ಚಿಸಲು ಆರ್‌ಎಸ್‌ಎಸ್‌ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹರಿಪ್ರಸಾದ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ತಮ್ಮ ಭಾಷಣದ ಬಹುಭಾಗವನ್ನು ಆರ್‌ಎಸ್‌ಎಸ್‌ ಹಾಗೂ ಹಿಂದುತ್ವದ ವಿರುದ್ಧದ ಟೀಕೆಗೆ ಮೀಸಲಿಟ್ಟಿದ್ದಾರೆ. ಇದೇ ಧೋರಣೆ ಮುಂದುವರಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಹಿನ್ನಡೆ ಉಂಟಾಗಲಿದೆ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಡ್ರಗ್ಸ್ ಮಾಫಿಯಾ, ಅಪರಾಧ ಪ್ರಕರಣಗಳು ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಅವುಗಳತ್ತ ಗಮನ ಹರಿಸಬೇಕಾದ ಸಚಿವರು ಆರ್‌ಎಸ್‌ಎಸ್‌ ಮತ್ತು ಹಿಂದುತ್ವದ ವಿರುದ್ಧ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು. ಆರ್‌ಎಸ್‌ಎಸ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ ಹಾಗೂ ಬಿ.ಕೆ. ಹರಿಪ್ರಸಾದ್ ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು.

Don't behave like urban Naxals, ask for forgiveness from the people of the state - Eshwarappa argues

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close