SUDDILIVE | | SHIVAMOGGA
ವರದಕ್ಷಿಣೆ ಕಿರುಕುಳ ಪ್ರಕರಣ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ- Dowry harassment case: Accused sentenced to 3 years in prison
ಶಿವಮೊಗ್ಗ, ಜೂನ್ 8: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಮೂರು ವರ್ಷಗಳ ಸಾದಾ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಮೊಗ್ಗ ನಗರದ ಅಬ್ಬಲಗೆರೆ ಹುಣಸೋಡು ಗ್ರಾಮದ ನಿವಾಸಿ ಶ್ರೀನಿವಾಸ್ ಅವರು ತಮ್ಮ ಪತ್ನಿ ಕಾವ್ಯ ಅವರಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ಆರೋಪದಡಿ 2023ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು 2024ರಲ್ಲಿ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ನಡೆದ ಸಾಕ್ಷ್ಯ ವಿಚಾರಣೆ ಹಾಗೂ ಉಭಯಪಕ್ಷಗಳ ವಾದ ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರಿಗೆ ಐಪಿಸಿ ಕಲಂ 498(ಎ) ಅಡಿಯಲ್ಲಿ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.

