SUDDILIVE || SHIVAMOGGA
ಶಿವಮೊಗ್ಗದಲ್ಲಿ ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಕಂಪ್ಯೂಟರ್, ಪೀಠೋಪಕರಣಗಳು ಭಸ್ಮ- Fire breaks out at Union Bank in Shivamogga; Computers, furniture gutted
ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಸಮೀಪದ ಬಿ.ಎಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.
ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆದ ವೇಳೆ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರಣ ರಾತ್ರಿಯೇ ಬೆಂಕಿ ಅವಘಡ ಕಾಣಿಸಿಕೊಂಡು ಬೆಳಿಗ್ಗೆ ಅಷ್ಟು ಹೊತ್ತಿಗೆ ಆರಿಹೋಗಿತ್ತು.
ಅಗ್ನಿ ಅವಘಡದಲ್ಲಿ ಕಂಪ್ಯೂಟರ್‌ಗಳು, ಏರ್ ಕೂಲರ್‌ಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಪೀಠೋಪಕರಣಗಳು ಸಂಪೂರ್ಣ ಸುಟ್ಟುಹೋಗಿವೆ. ಕಚೇರಿಯಲ್ಲಿದ್ದ ಕೆಲವು ಪ್ರಮುಖ ದಾಖಲೆಗಳಿಗೂ ಹಾನಿಯಾಗಿದೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

