SUDDILIVE || SHIVAMOGGA
ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ತಿಂಗಳ ಚಿರತೆ ಮರಿ ಸಾವು; ತಹಶೀಲ್ದಾರ್ ಸಮ್ಮುಖದಲ್ಲಿ ಅಂತ್ಯಸಂಸ್ಕಾರ-Four-month-old leopard cub dies after treatment fails; cremation in presence of Tahsildar
ತಾಲೂಕಿನ ಕಾರ್ಗಲ್ ವನ್ಯಜೀವಿ ವಲಯದ ಮುಪ್ಪಾಣಿ ಶಾಖೆಯ ಸಸಿ ಚೌಕ ಕಳ್ಳಬೇಟೆ ನಿಗ್ರಹ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು ನಾಲ್ಕು ತಿಂಗಳ ಚಿರತೆಮರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಅಸ್ವಸ್ಥಗೊಂಡಿದ್ದ ಸುಮಾರು ನಾಲ್ಕು ತಿಂಗಳ ವಯಸ್ಸಿನ ಚಿರತೆ ಮರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಅರಣ್ಯ ಸಿಬ್ಬಂದಿಗೆ ಅಸ್ವಸ್ಥ ಸ್ಥಿತಿಯಲ್ಲಿ ಚಿರತೆ ಮರಿ ಪತ್ತೆಯಾಗಿದ್ದು, ತಕ್ಷಣವೇ ಅದನ್ನು ರಕ್ಷಿಸಿ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಪಶುವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಚೇತರಿಕೆ ಕಾಣಿಸದೇ ಮರಿ ಮೃತಪಟ್ಟಿದೆ.
ಚಿರತೆಯ ಮರಣದ ಬಳಿಕ ಅರಣ್ಯ ಇಲಾಖೆ ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿತು. ಬಳಿಕ ತಹಶೀಲ್ದಾರ್ ಡಾ. ಪ್ರತಿಭಾ ಅವರ ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತಿಯಲ್ಲಿ ಚಿರತೆ ಮರಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಚಿರತೆ ಮರಿಯ ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.
Four-month-old leopard cub dies after treatment fails; cremation in presence of Tahsildar
