SUDDILIVE || SHIVAMOGGA
ರಾಜೀವ್ ಗಾಂಧಿ ಬಡಾವಣೆಯಲ್ಲಿ ನಾಲ್ವರ ಮೇಲೆ ಹಲ್ಲೆ-Four people attacked in Rajiv Gandhi Layout
ಕ್ಷುಲ್ಲಕ ಕಾರಣಕ್ಕೆ ಮನೆ ಬಳಿ ಬಂದು ಗಲಾಟೆ ಮಾಡಿ, ಹಲ್ಲೆ ನಡೆದಿದ್ದು, ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದ ಘಟನೆ ನಡೆದಿದೆ.
ಮನೆಯಲ್ಲಿದ್ದ ನಾಲ್ವರಿಗೆ ಚಾಕು ಹಾಗೂ ಇತರೆ ಆಯುಧಗಳಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ನಾಲ್ವರು ಯುವಕರು ಮನೆ ಬಳಿ ಬಂದು ಹಲ್ಲೆ ಮಾಡಿದ್ದಾರೆಂದು ಆರೋಪ ಕೇಳಿ ಬಂದಿದೆ.
ಗರ್ಭಿಣಿ ಮಹಿಳೆ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆದಿದೆ. ಹಸೀನಾ (27), ಗರ್ಭಿಣಿ ಮಹಿಳೆ ಉಜ್ಮಾ (21), ಸಲ್ಮಾ (35), ಸೈಯದ್ ಶೇರು (25) ಎಂಬುವವರ ಮೇಲೆ ಹಲ್ಲೆ ನಡೆದಿದೆ. ಅಬ್ಬು ಮತ್ತು ಯಾಸಿನ್ ತಂಡದಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ನಿನ್ನೆ ಬಡಾವಣೆಯಲ್ಲಿ ಬಂಗಾರದ ಚೈನ್ ಸಿಕ್ಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಗಲಾಟೆ ನಡೆದಿತ್ತು. ಇಂದು ಪುನಃ ಮನೆ ಬಳಿ ಬಂದು ಗಲಾಟೆ ಮಾಡಿ, ಯುವಕರಿಂದ ಹಲ್ಲೆ ನಡೆದಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ.
ಹಲ್ಲೆಗೊಳಗಾದವರಿಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಿಗೆ ಮೆಗ್ಗಾನ್ ಭೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Four people attacked in Rajiv Gandhi Layout
