SUDDILIVE || SHIVAMOGGA
₹65 ಸಾವಿರ ಮೌಲ್ಯದ ಗಾಂಜಾ ವಶ; ಆರೋಪಿ ಬಂಧನ-Ganja worth Rs 65 thousand seized; accused arrested
ಶಿವಮೊಗ್ಗ, ಜೂ.24: ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹65,000 ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆಲರ್ ಶಾದಿ ಮಹಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ದಾಳಿಯ ವೇಳೆ ಅಕ್ರಂ ಖಾನ್ (23) ಎಂಬಾತನನ್ನು ಬಂಧಿಸಿ, ಆತನಿಂದ 1 ಕೆಜಿ 261 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಅಂದಾಜು ಮೌಲ್ಯ ₹65 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0225/2026ರಡಿ ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
