SUDDILIVE || BHADRAVATHI || HOSANAGARA
ಡಿ ಗ್ರೂಪ್ ನೌಕರ ಮುನಿರಾಜು ನಿಧನ-D group employee Muniraju dies after dialysis treatment fails
ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಮುನಿರಾಜು (40) ಅವರು ಆರೋಗ್ಯ ಸಮಸ್ಯೆಯಿಂದ ಇಂದು ಬೆಳಿಗ್ಗೆ ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತಂದೆಯ ಅಕಾಲಿಕ ನಿಧನದ ಬಳಿಕ ಅನುಕಂಪ ಆಧಾರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ಮುನಿರಾಜು, ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಗಂಭೀರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಒಂದು ಕಿಡ್ನಿಯನ್ನು ಕಳೆದುಕೊಂಡು ನಿಯಮಿತ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದರು.
ಪತ್ನಿಯ ಊರು ಹೊಸನಗರವಾಗಿದ್ದ ಕಾರಣ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇತ್ತೀಚೆಗೆ ಕೌನ್ಸಿಲಿಂಗ್ ಮೂಲಕ ಭದ್ರಾವತಿಯಿಂದ ಹೊಸನಗರ ಸರ್ಕಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಲಯದಲ್ಲಿ ದುಃಖದ ವಾತಾವರಣ ಮೂಡಿಸಿದ್ದು, ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ.
