SUDDILIVE || SHIVAMOGGA
ಶಿವಮೊಗ್ಗ: ಜೂ.30 ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆರಂಭ; ಮನೆ ಮನೆಗೆ ಭೇಟಿ ನೀಡಲಿರುವ BLOಗಳು-House to House visit by Blo by june.30th
ಶಿವಮೊಗ್ಗ, ಜೂನ್ 05: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಕಾರ್ಯ ಆರಂಭಗೊಂಡಿದ್ದು, ಶಿವಮೊಗ್ಗ ಜಿಲ್ಲೆಯ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲೂ ಈ ಪ್ರಕ್ರಿಯೆ ನಡೆಯಲಿದೆ.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಶಿವಮೊಗ್ಗ ಅವರು ಪ್ರಕಟಣೆ ಹೊರಡಿಸಿದ್ದು, 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದೆ ಎಂದು ಸೂಡ ಆಯುಕ್ತ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮನೆ ಮನೆಗೆ ಭೇಟಿ
ಕ್ಷೇತ್ರದ 249 ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈಗಾಗಲೇ 2,20,910 ಮತದಾರರನ್ನು ಈ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಒಳಪಡಿಸಲಾಗಿದೆ.
ಪರಿಷ್ಕರಣೆ ಕಾರ್ಯದ ವೇಳೆ ಮತದಾರರು ಹಾಗೂ ಕುಟುಂಬದ ಇತರ ಸದಸ್ಯರಿಂದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಾಗುತ್ತದೆ. BLOಗಳು ಮತದಾರರಿಗೆ ಎನ್ಯುಮರೇಷನ್ ಫಾರ್ಮ್ (Enumeration Forms) ವಿತರಿಸಿ ಭರ್ತಿ ಮಾಡಿಸಿಕೊಳ್ಳಲಿದ್ದಾರೆ ಎಂದರು.
ರಾಜಕೀಯ ಪಕ್ಷಗಳ ಸಹಭಾಗಿತ್ವ
ಕ್ಷೇತ್ರದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ 996 ಬೂತ್ ಮಟ್ಟದ ಏಜೆಂಟರು (BLAs) ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಪಾಡಲು ಇವರ ಸಹಕಾರ ಪಡೆಯಲಾಗುತ್ತಿದೆ ಎಂದರು.
ವೇಳಾಪಟ್ಟಿ ಪ್ರಕಟ
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ವೇಳಾಪಟ್ಟಿಯಂತೆ:
- ಜೂನ್ 20 ರಿಂದ ಜೂನ್ 29, 2026: ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ
- ಜೂನ್ 30 ರಿಂದ ಜುಲೈ 29, 2026: BLOಗಳಿಂದ ಮನೆ-ಮನೆ ಭೇಟಿ
- ಜುಲೈ 29ರೊಳಗೆ: ಮತಗಟ್ಟೆಗಳ ಮರುಹೊಂದಾಣಿಕೆ
- ಆಗಸ್ಟ್ 5, 2026: ಕರಡು ಮತದಾರರ ಪಟ್ಟಿ ಪ್ರಕಟಣೆ
- ಆಗಸ್ಟ್ 5 ರಿಂದ ಸೆಪ್ಟೆಂಬರ್ 4, 2026: ಆಕ್ಷೇಪಣೆ ಹಾಗೂ ಅರ್ಜಿಗಳ ಸಲ್ಲಿಕೆ
- ಅಕ್ಟೋಬರ್ 3, 2026ರವರೆಗೆ: ಅರ್ಜಿಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ
- ಅಕ್ಟೋಬರ್ 7, 2026: ಅಂತಿಮ ಮತದಾರರ ಪಟ್ಟಿ ಪ್ರಕಟಣೆ
ಮಾಹಿತಿ ಎಲ್ಲಿಂದ ಪಡೆಯಬಹುದು?
ಮತದಾರರ ಪಟ್ಟಿ ಹಾಗೂ ಪರಿಷ್ಕರಣೆ ಸಂಬಂಧಿತ ಮಾಹಿತಿಯನ್ನು ಜಿಲ್ಲಾ ಆಡಳಿತದ ಅಧಿಕೃತ ವೆಬ್‌ಸೈಟ್, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಚುನಾವಣಾ ಆಯೋಗದ ಪೋರ್ಟಲ್‌ನಲ್ಲಿ ಪಡೆಯಬಹುದಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳು ಸಾರ್ವಜನಿಕರು BLOಗಳಿಗೆ ಅಗತ್ಯ ಸಹಕಾರ ನೀಡುವಂತೆ ಹಾಗೂ ಮತದಾರರ ಮಾಹಿತಿಯನ್ನು ಸರಿಯಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ.
ಶಿಕ್ಷಾರ್ಹ ಅಪರಾಧ

