SUDDILIVE || SHIVAMOGGA
ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ: ಶಿವಮೊಗ್ಗದಲ್ಲಿ 5 ಕೆ ಮ್ಯಾರಥಾನ್-International Anti-Drug Day: 5K Marathon in Shivamogga
ಶಿವಮೊಗ್ಗ, ಜೂನ್ 25: ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಗುರುವಾರ ಬೆಳಿಗ್ಗೆ 5 ಕಿಲೋಮೀಟರ್ ಮ್ಯಾರಥಾನ್ ನಡೆದಿದೆ.
ಬೆಳಿಗ್ಗೆ 6 ಗಂಟೆಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈದಾನದಿಂದ ಆರಂಭವಾದ ಮ್ಯಾರಥಾನ್‌ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್. (ಐಎಎಸ್) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ಉಪಸ್ಥಿತರಿದ್ದರು.
ಮ್ಯಾರಥಾನ್ ಅಶೋಕ ವೃತ್ತ, ಎಎ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ ಹಾಗೂ ಹೆಲಿಪ್ಯಾಡ್ ವೃತ್ತ ಮಾರ್ಗವಾಗಿ ಸಂಚರಿಸಿ ಮತ್ತೆ ಡಿಎಆರ್ ಪೊಲೀಸ್ ಮೈದಾನದಲ್ಲಿ ಮುಕ್ತಾಯಗೊಂಡಿತು.
ಕಾರ್ಯಕ್ರಮದ ಅಂತ್ಯದಲ್ಲಿ ಮ್ಯಾರಥಾನ್ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಮ್ಯಾರಥಾನ್‌ನಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.

