SUDDILIVE || SHIVAMOGGA
ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ-Job direct interview on June 20th
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಯಾವುದೇ ಡಿಗ್ರಿ ಮತ್ತು ಮಾಸ್ಟರ್ ಡಿಗ್ರಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
Job direct interview on June 20th
